370ನೇ ಆರ್ಟಿಕಲ್ ರದ್ದು ಕೇಂದ್ರದ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್: ಚುನಾವಣೆ ನಡೆಸಲು ಸೂಚನೆ.

ನವದೆಹಲಿ,11,2023(www.justkannada.in):  ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ 370ನೇ ಆರ್ಟಿಕಲ್ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ತೀರ್ಪು ಹೊರ ಬಿದಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಈ ತೀರ್ಪು ನೀಡಿದೆ.

ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಪೀಠವು 16 ದಿನಗಳಿಂದ ಅರ್ಜಿದಾರರು ಮತ್ತು ಕೇಂದ್ರದ ವಾದಗಳನ್ನು ಆಲಿಸುತ್ತಿತ್ತು. ಸೆಪ್ಟೆಂಬರ್ 5 ರಂದು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಡಿಸೆಂಬರ್ 11 ಕ್ಕೆ ಕಾಯ್ದಿರಿಸಿತ್ತು.

ಸರ್ಕಾರದ ಆದೇಶವನ್ನ ನಾವು ಪ್ರಶ್ನೆ ಮಾಡಲು ಆಗುವುದಿಲ್ಲ ಸಂಸತ್ ಮತ್ತು ರಾಷ್ಟ್ರಪತಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು. ಜಮ್ಮು ಕಾಶ್ಮೀರಕ್ಕೆ ರಾಷ್ಟ್ರಪತಿಗಳು 370(3) ಅಡಿಯ ಕ್ರಮ ದುರುದ್ದೇಶಪೂರಿತವಲ್ಲ. 370ನೇ ಆರ್ಟಿಕಲ್ ರದ್ದು ಸುಪ್ರೀಂಕೋರ್ಟ್ ಕ್ರಮ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಇನ್ನು 2024 ಸೆಪ್ಟಂಬರ್ 30ರೊಳಗೆ ಚುನಾವಣೆ ನಡೆಸಿ  ಎಂದು ಕೇಂದ್ರ ಚುನಾವಣೆ ಆಯೋಗಕ್ಕೆ ಸೂಚನೆ ನೀಡಿರುವ ಸುಪ್ರೀಂಕೋರ್ಟ್ ಪಂಚ ಪೀಠ, ಲಡಾಖ್ ಕೇಂದ್ರಾಡಳಿತ ಪ್ರದೇವಾಗಿಸುವ ಕ್ರಮಕ್ಕೆ ಅಸ್ತು ಎಂದಿದೆ.

Key words: Supreme Court –upheld- Centre’s -order –abrogating- Article 370